Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:2 - ಕನ್ನಡ ಸತ್ಯವೇದವು J.V. (BSI)

2 ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 (ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜು ಅನಿ ತೆಚಿ ಶಿಸಾ ಸಾಂಚೆ ಜೆವಾನ್ ಕರುಕ್ ಲಾಗಲ್ಲ್ಯಾನಿ. ತನ್ನಾ ಅದ್ದಿಚ್ ಗಿರೊ ಜೆಜುಕ್ ಧರುನ್ ದಿವ್ಚೆ ಮನ್ತಲಿ ಯೆವ್ಜನ್ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾಚ್ಯಾ ಜುದಾಸಾಚ್ಯಾ ಮನಾತ್ ಘಾಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:2
14 ತಿಳಿವುಗಳ ಹೋಲಿಕೆ  

ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;


ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು


ಯೆರೂಸಲೇವಿುಗೋಸ್ಕರ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂದು ಯಾರಿಗೂ ತಿಳಿಸದೆ ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ಹೊದ್ದಿದ್ದ ಮೇಲ್ಹೊದಿಕೆಯನ್ನು ತೆಗೆದಿಟ್ಟು ಕೈಪಾವುಡವನ್ನು ತಕ್ಕೊಂಡು ನಡುವಿಗೆ ಕಟ್ಟಿಕೊಂಡನು.


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.


ಯೇಸು ತನ್ನನ್ನು ಹಿಡುಕೊಡುವವನು ಇಂಥವನೇ ಎಂದು ತಿಳಿದಿದ್ದದರಿಂದ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು