Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:20 - ಕನ್ನಡ ಸತ್ಯವೇದವು J.V. (BSI)

20 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ “ಜೊ ಕೊನ್ ಮಿಯಾ ಧಾಡ್ವಲ್ಲ್ಯಾಕ್, ಸ್ವಿಕಾರ್ ಘೆತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:20
9 ತಿಳಿವುಗಳ ಹೋಲಿಕೆ  

ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು