ಯೋಹಾನ 13:21 - ಕನ್ನಡ ಸತ್ಯವೇದವು J.V. (BSI)21 ಇದನ್ನು ಹೇಳಿ ಯೇಸು ಆತ್ಮದಲ್ಲಿ ತತ್ತರಗೊಂಡು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ಸ್ಪಷ್ಟವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ದುಕಾನಿ ಭರಲ್ಲೊ ತನ್ನಾ ತೆನಿ “ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ತುಮ್ಚ್ಯಾತ್ಲೊ ಎಕ್ಲೊ ಮಾಕಾ ಘಾತ್ ಕರುನ್ ಧರುನ್ ದಿನಾರ್ ಹಾಯ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |