Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:23 - ಕನ್ನಡ ಸತ್ಯವೇದವು J.V. (BSI)

23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಶಿಸಾನಿತ್ಲೊ ಎಕ್ಲೊ, ಜೆಜುಚ್ಯಾ ಪ್ರೆಮಾಚೊ ಶಿಸ್ ಜೆಜುಕ್ ಲಾಗುನ್ ಬಸಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:23
15 ತಿಳಿವುಗಳ ಹೋಲಿಕೆ  

ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು.


ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.


ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು.


ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು.


ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.


ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ದೊಡ್ಡದಾಗುವವರೆಗೆ ಮಗಳಂತೆ ಅವನ ಸಂಗಡಲೂ ಅವನ ಮಕ್ಕಳ ಸಂಗಡಲೂ ಇದ್ದುಕೊಂಡು ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು; ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆ ಮಾಡುತ್ತಿತ್ತು.


ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು.


ಅವನು ಹಾಗೆಯೇ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ಅವನು ಯಾರು? ಅಂತ ಕೇಳಿದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಇವನಿಗೆ ಸೀಮೋನ ಪೇತ್ರನು ಸನ್ನೆಮಾಡಿ - ಯಾರನ್ನು ಕುರಿತು ಮಾತಾಡಿದನು, ತಿಳಿಸು ಎಂದು ಹೇಳಿದನು.


ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು