Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:31 - ಕನ್ನಡ ಸತ್ಯವೇದವು J.V. (BSI)

31 ಅವನು ಹೊರಗೆ ಹೋದ ಮೇಲೆ ಯೇಸು - ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ, ಮತ್ತು ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜುದಾಸ್ ಗೆಲ್ಲ್ಯಾ ತನ್ನಾ, ಜೆಜುನ್, “ಅತ್ತಾ ಮಾನ್ಸಾಚ್ಯಾ ಲೆಕಾಚಿ ಮಹಿಮಾ ದಿಸುಕ್ ಲಾಗ್ಲಾ, ಅನಿ ತ್ಯೆಚ್ಯಾ ವೈನಾ ದೆವಾಚಿಚ್ ಮಹಿಮಾ ದಿಸುನ್ ಯೆತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:31
27 ತಿಳಿವುಗಳ ಹೋಲಿಕೆ  

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುತ್ತಾ ನನ್ನನ್ನೇ ಮಹಿಮೆಪಡಿಸುವನು.


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.


ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು