Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:37 - ಕನ್ನಡ ಸತ್ಯವೇದವು J.V. (BSI)

37 ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ಪೆದ್ರುನ್ “ಧನಿಯಾ ಕಶ್ಯಾಕ್ ಮಿಯಾ ತುಜ್ಯಾ ಫಾಟ್ನಾ ಯೆವ್ಕ್ ಹೊಯ್ನಾ?” ಮನುನ್ ಇಚಾರ್‍ಲ್ಯಾನ್, ಅನಿ “ಮಿಯಾ ತುಜ್ಯಾಸಾಟಿ ಮರುಕ್ ಸೈತ್ ತಯಾರ್ ಹಾಂವ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:37
7 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು