Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:8 - ಕನ್ನಡ ಸತ್ಯವೇದವು J.V. (BSI)

8 ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಪೆದ್ರುನ್, “ನಾ ಕನ್ನಾಚ್ ಮಾಜೆ ಪಾಯ್ ಧುವ್ಕ್ ಮಿಯಾ ತುಕಾ ಸೊಡಿನಾ” ಮಟ್ಲ್ಯಾನ್. ತನ್ನಾ ಜೆಜುನ್, “ಮಿಯಾ ತುಜೆ ಪಾಯ್ ಧುಯ್‍ನಸ್ಲ್ಯಾರ್, ತುಕಾ ಮಾಜಾಕ್ಡೆ ಕಾಯ್ಬಿ ವಾಟ್ನಿ ನಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:8
28 ತಿಳಿವುಗಳ ಹೋಲಿಕೆ  

ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಅಂಥ ಉಪದೇಶಗಳು ಸ್ವಕಲ್ಪಿತಾಚಾರವನ್ನೂ ಅತಿವಿನಯವನ್ನೂ ದೇಹದಂಡನೆಯನ್ನೂ ಬೋಧಿಸುತ್ತಾ ಹೆಸರಿಗೆ ಮಾತ್ರ ಜ್ಞಾನವೆನಿಸಿಕೊಳ್ಳುತ್ತವೆಯಲ್ಲದೆ ಶಾರೀರಿಕ ಇಚ್ಫೆಗಳನ್ನು ನಿಗ್ರಹಿಸುವದರಲ್ಲಿ ಯಾವ ಪ್ರಯೋಜನಕ್ಕೂ ಬರುವದಿಲ್ಲ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ಪೇತ್ರನು ಆತನಿಗೆ - ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಎಂದಿಗೂ ಹಿಂಜರಿಯುವದಿಲ್ಲ ಎಂದು ಉತ್ತರಕೊಡಲು


ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.


ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಸೀಮೋನ ಪೇತ್ರನು - ಸ್ವಾಮೀ, ನನ್ನ ಕಾಲುಗಳನ್ನು ಮಾತ್ರವಲ್ಲದೆ ಕೈಗಳನ್ನೂ ತಲೆಯನ್ನೂ ಸಹ ತೊಳೆಯಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು