Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:18 - ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ಜಾತಾನಾ ತುಮ್ಕಾ ಅನಾಥ್ ಸರ್ಕೆ ಕರುನ್ ಸೊಡುನ್ ಜಾಯ್ನಾ, ಮಿಯಾ ಅನಿ ಪರ್ತುನ್ ತುಮ್ಚ್ಯಾಕ್ಡೆ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:18
18 ತಿಳಿವುಗಳ ಹೋಲಿಕೆ  

ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಿಗಳು ವಿಧವೆಯ ಗತಿಗೆ ಬಂದಿದ್ದಾರೆ.


ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು