ಯೋಹಾನ 14:19 - ಕನ್ನಡ ಸತ್ಯವೇದವು J.V. (BSI)19 ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಎಕ್ ಉಲ್ಲ್ಯಾಶ್ಯಾ ಎಳಾನ್ ಹ್ಯೊ ಜಗ್ ಮಾಕಾ ಬಗಿನಾ. ಖರೆ ತುಮಿ ಮಾಕಾ ಬಗ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ಮಿಯಾ ಝಿತ್ತೊ ರ್‍ಹಾತಾ ಅನಿ ತುಮಿಬಿ ಝಿತ್ತೆ ರ್‍ಹಾತ್ಯಾಶಿ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.