Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:9 - ಕನ್ನಡ ಸತ್ಯವೇದವು J.V. (BSI)

9 ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುನ್ ತೆಕಾ ಜಬಾಬ್ ದಿಲ್ಲ್ಯಾನ್ ಎವ್ಡಿ ಲೈ ದಿಸಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲೊ, ಫಿಲಿಪಾ ತಿಯಾ ಅಜುನ್‍ಬಿ ಮಾಕಾ ವಳ್ಕುಕ್ ನೆ? ಜೆ ಕೊನ್ ಮಾಕಾ ಬಗಟ್ಲಾ, ತೆನಿ ಬಾಬಾಕ್ ಬಗಟ್ಲಾ, ಅಶೆ ರ್‍ಹಾತಾನಾ ತಿಯಾ ಅಮ್ಕಾ ಬಾಬಾಕ್ ದಾಕ್ವು? ಮನುನ್ ಕಶೆ ಇಚಾರುಕ್ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:9
16 ತಿಳಿವುಗಳ ಹೋಲಿಕೆ  

ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.


ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು


ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ?


ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರೋಣವಾಗುತ್ತಿರುವಲ್ಲಿ ನಿಮ್ಮೊಳಗೆ ಕೆಲವರು - ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವದು ಹೇಗೆ?


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ.


ಆಗ ಅವನು ಇಸಾಕನನ್ನು ಕರೆಸಿ - ನಿಶ್ಚಯವಾಗಿ ಈಕೆಯು ನಿನ್ನ ಹೆಂಡತಿಯಲ್ಲವೇ, ತಂಗಿ ಅಂತ ಯಾಕೆ ಹೇಳಿದಿ ಎಂದು ಕೇಳಲು ಇಸಾಕನು - ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು ಅಂದನು.


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು