Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:18 - ಕನ್ನಡ ಸತ್ಯವೇದವು J.V. (BSI)

18 ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಜಗಾನ್ ತುಮ್ಚೊ ದ್ವೆಸ್ ಕರ್ಲ್ಯಾರ್ ತೆನಿ ತುಮ್ಚ್ಯಾನ್ಕಿ ಅದ್ದಿ ತೆನಿ ಮಾಜೊ ದ್ವೆಸ್ ಕರ್‍ಲಾ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:18
22 ತಿಳಿವುಗಳ ಹೋಲಿಕೆ  

ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;


ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನೀವು ಧೈರ್ಯಗೆಟ್ಟು ಹಿಂಜರಿಯಬಾರದೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು