ಯೋಹಾನ 15:20 - ಕನ್ನಡ ಸತ್ಯವೇದವು J.V. (BSI)20 ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಿಯಾ ತುಮ್ಕಾ ಸಾಂಗಲ್ಲೆ ಯಾದ್ ಥವ್ನ್ ಘೆವಾ ಆಳ್ ಅಪ್ನಾಚ್ಯಾ ಧನಿಯಾಚ್ಯಾನ್ಕಿಬಿ ಮೊಟೊ ನ್ಹಯ್ ಜರ್ ತರ್ ಲೊಕಾ ಮಾಕಾ ತರಾಸ್ ದಿತ್ಯಾತ್ , ತರ್ ಲೊಕಾ ತುಮ್ಕಾಬಿ ತರಾಸ್ ದಿತ್ಯಾತುಚ್, ತೆನಿ ಮಾಜ್ಯಾ ಶಿಕಾಪಾಕ್ ಖಾಲ್ತಿ ಹೊಲ್ಯಾನಿತರ್, ತುಮ್ಚ್ಯಾಬಿ ಶಿಕಾಪಾಕ್ನಿ ಖಾಲ್ತಿ ಹೊತ್ಯಾತ್. ಅಧ್ಯಾಯವನ್ನು ನೋಡಿ |