Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:8 - ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಜಾಸ್ತಿಚಿ ಫಳಾ ದಿಲ್ಲ್ಯಾ ವೈನಾ ಮಾಜ್ಯಾ ಬಾಬಾಚಿ ಮಹಿಮಾ ದಾಕ್ವುನ್ ದಿಲ್ಯಾಶಿ, ಅನಿ ಅಶೆಚ್ ತುಮಿ ಮಾಜಿ ಶಿಸಾ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:8
19 ತಿಳಿವುಗಳ ಹೋಲಿಕೆ  

ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.


ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು