Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:13 - ಕನ್ನಡ ಸತ್ಯವೇದವು J.V. (BSI)

13 ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶೆಬಿ ಪವಿತ್ರ್ ಆತ್ಮೊ ಯೆಲ್ಲ್ಯಾ ತನ್ನಾ ತೊ ತುಮ್ಕಾ ದೆವಾಚ್ಯಾ ವಿಶಯಾತ್ಲೆ ಖರೆಪಾನ್ ದಾಕ್ವುನ್ ದಿತಾ, ತೊ ತುಮ್ಕಾ ಸಗ್ಳ್ಯಾ ಖರೆಪಾನಾತ್ ಚಾಲ್ವುನ್ ನ್ಹೆತಾ. ತೊ ಅಪ್ನಾಚ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಬೊಲಿನಾ, ತೊ ಅಪ್ನಿ ಆಯ್ಕಲ್ಲೆಚ್ ಸಾಂಗ್ತಾ. ಅನಿ ಫಿಡೆ ಯೆತಲ್ಯಾ ವಿಶಯಾಂಚ್ಯಾ ವಿಶಯಾತ್ ತೊ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:13
32 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.


ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು