Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:16 - ಕನ್ನಡ ಸತ್ಯವೇದವು J.V. (BSI)

16 ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಅನಿ ಎಕ್ ಉಲ್ಲ್ಯಾ ಎಳಾಚ್ಯಾ ಮಾನಾ ಮಿಯಾ ತುಮ್ಕಾ ಬಗುಕ್ ಗಾವಿನಾ ಮಾನಾ ಅನಿ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:16
19 ತಿಳಿವುಗಳ ಹೋಲಿಕೆ  

ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.


ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;


ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ನಾನು ತಂದೆಯ ಬಳಿಗೆ ಹೋಗಿ ಇನ್ನು ಮೇಲೆ ನಿಮಗೆ ಕಾಣಿಸದೆ ಇರುವದರಿಂದ ನೀತಿಯ ವಿಷಯದಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು