Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:17 - ಕನ್ನಡ ಸತ್ಯವೇದವು J.V. (BSI)

17 ಇದನ್ನು ಕೇಳಿ ಶಿಷ್ಯರಲ್ಲಿ ಕೆಲವರು - ಇದೇನು ಈತನು ಹೇಳುವ ಮಾತು? ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅನ್ನುತ್ತಾನೆ; ಮತ್ತು ನಾನು ತಂದೆಯ ಬಳಿಗೆ ಹೋಗುವದರಿಂದ ಅನ್ನುತ್ತಾನೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸು ಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಷ್ಯರಲ್ಲಿ ಕೆಲವರು, “‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವರ ಶಿಷ್ಯರಲ್ಲಿ ಕೆಲವರು, “ಇವರು ನಮಗೆ ಹೇಳುವುದೇನು? ‘ಸ್ವಲ್ಪಕಾಲ ನೀವು ನನ್ನನ್ನು ಕಾಣುವುದಿಲ್ಲ ಮತ್ತು ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ,’ ಎನ್ನುತ್ತಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಶಿಸಾನಿತ್ಲ್ಯಾ ಉಲ್ಲ್ಯಾನಿ ಎಕಾಮೆಕಾತ್ನಿ “ಅಶೆ ಮಟ್ಲ್ಯಾರ್ ಕಾಯ್? ತೊ ಮನ್ತಾ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವಿನಾ, ಅನಿ ಅನಿ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವ್ತಾ ಅನಿ ತೊ ಮಾನಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:17
12 ತಿಳಿವುಗಳ ಹೋಲಿಕೆ  

ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;


ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.


ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?


ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು


ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.


ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ನೀವು ಧೈರ್ಯಗೆಟ್ಟು ಹಿಂಜರಿಯಬಾರದೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ


ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.


ಸ್ವಲ್ಪಕಾಲವೆಂದು ಈತನು ಹೇಳುವ ಈ ಮಾತೇನು? ಏನು ಮಾತಾಡುತ್ತಾನೋ ನಮಗೆ ತಿಳಿಯದು ಅಂದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು