Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:22 - ಕನ್ನಡ ಸತ್ಯವೇದವು J.V. (BSI)

22 ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆಚ್ ತುಮ್ಚ್ಯಾ ವಾಂಗ್ಡಾಬಿ ಹೊತಾ, ತುಮಿ ಅತ್ತಾ ದುಕಾತ್ ಹಾಶಿ, ಖರೆ ಮಿಯಾ ಅನಿ ಎಗ್ದಾ ತುಮ್ಕಾ ಭೆಟ್ತಾನಾ ತುಮ್ಚಿ ಮನಾ ಖುಶಿನ್ ಭರಲ್ಲಿ ರ್‍ಹಾತ್ಯಾತ್. ತಿ ಕುಶಿ ಕೊನಾಕ್ಬಿ ತುಮ್ಚ್ಯಾಕ್ನಾ ಕಾಡುನ್ ನ್ಹೆವ್ಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:22
40 ತಿಳಿವುಗಳ ಹೋಲಿಕೆ  

ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮಭರಿತರೂ ಆದರು.


ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಆದರೆ ಅವರು ಸಂತೋಷದ ದೆಸೆಯಿಂದ ಇನ್ನೂ ನಂಬದೆ ಆಶ್ಚರ್ಯಪಡುತ್ತಿರಲಾಗಿ ಆತನು - ತಿನ್ನತಕ್ಕ ಪದಾರ್ಥವೇನಾದರೂ ಇಲ್ಲಿ ನಿಮಗುಂಟೋ ಎಂದು ಅವರನ್ನು ಕೇಳಲು


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ;


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ಆತನಲ್ಲಿ ನಮ್ಮ ಹೃದಯವು ಸಂತೋಷಿಸುವದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು