Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:25 - ಕನ್ನಡ ಸತ್ಯವೇದವು J.V. (BSI)

25 ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಹೆ ಸಗ್ಳೆ ಸಾಂಗುಕ್ ಮಿಯಾ ಒಡ್ಪಾ ವಾಪರ್‍ಲೊ, ಖರೆ ಎಕ್ ಎಳ್ ಯೆತಾ, ತನ್ನಾ ಮಿಯಾ ಮಾಜ್ಯಾ ಬಾಬಾಚ್ಯಾ ವಿಶಯಾತ್ ತುಮ್ಚೆಕ್ಡೆ ಫೊಡುನ್ ಬೊಲ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:25
19 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.


ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.


ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಇವು ಗಾದೆ, ಸಾಮ, ಜ್ಞಾನಿಗಳ ನುಡಿ, ಒಗಟು ಇವುಗಳನ್ನು ತಿಳಿಯಲು ಸಾಧನವಾಗಿವೆ.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ಆತನು ಈ ಮಾತನ್ನು ಏನೂ ಗುಂಬವಿಲ್ಲದೆ ಹೇಳಿದನು. ಆಗ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು