Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:28 - ಕನ್ನಡ ಸತ್ಯವೇದವು J.V. (BSI)

28 ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಿಯಾ ಬಾಬಾಕ್ನಾ ಯೆಲೊ, ಅನಿ ಮಿಯಾ ಹ್ಯಾ ಜಗಾತ್ ಯೆಲೊ, ಅನಿ ಅತ್ತಾ ಮಿಯಾ ಹ್ಯೊ ಜಗ್ ಸೊಡುನ್ ಬಾಬಾಕ್ಡೆ ಜಾವ್ಕ್ ಲಾಗ್ಲಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:28
15 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.


ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ನಾನು ತಂದೆಯ ಬಳಿಗೆ ಹೋಗಿ ಇನ್ನು ಮೇಲೆ ನಿಮಗೆ ಕಾಣಿಸದೆ ಇರುವದರಿಂದ ನೀತಿಯ ವಿಷಯದಲ್ಲಿಯೂ


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು