Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:5 - ಕನ್ನಡ ಸತ್ಯವೇದವು J.V. (BSI)

5 ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಅತ್ತಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾವ್ಕ್ ಲಾಗ್ಲಾ, ಅನಿಬಿ ತುಮ್ಚ್ಯಾತ್ಲೊ ಕೊನ್ಬಿ ಮಾಕಾ ತಿಯಾ ಖೈ ಜಾವ್ಲೆ ಮನುನ್ ಇಚಾರುಕ್ ಹೊಯ್ನಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:5
15 ತಿಳಿವುಗಳ ಹೋಲಿಕೆ  

ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.


ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ನಾನು ತಂದೆಯ ಬಳಿಗೆ ಹೋಗಿ ಇನ್ನು ಮೇಲೆ ನಿಮಗೆ ಕಾಣಿಸದೆ ಇರುವದರಿಂದ ನೀತಿಯ ವಿಷಯದಲ್ಲಿಯೂ


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ಇದನ್ನು ಕೇಳಿ ಶಿಷ್ಯರಲ್ಲಿ ಕೆಲವರು - ಇದೇನು ಈತನು ಹೇಳುವ ಮಾತು? ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅನ್ನುತ್ತಾನೆ; ಮತ್ತು ನಾನು ತಂದೆಯ ಬಳಿಗೆ ಹೋಗುವದರಿಂದ ಅನ್ನುತ್ತಾನೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು