Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:7 - ಕನ್ನಡ ಸತ್ಯವೇದವು J.V. (BSI)

7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ಕೇಳಿರಿ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಹೇಗಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಮಿಯಾ ತುಮ್ಚ್ಯಾಕ್ನಾ ಧುರ್ ಗೆಲ್ಲೆ ತುಮ್ಕಾಚ್ ಬರೆ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಜಾಯ್ ನಸ್ಲ್ಯಾರ್ ಮಜತ್ ಕರ್‍ತಲೊ ಯೆಯ್ನಾ, ಮಿಯಾ ತುಮ್ಚ್ಯಾಕ್ನಾ ಗೆಲೊ ತರ್ ತೆಕಾ ತುಮ್ಚೆಕ್ಡೆ ಧಾಡುನ್ ದಿತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:7
19 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -


ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಅಂದನು.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು