Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:1 - ಕನ್ನಡ ಸತ್ಯವೇದವು J.V. (BSI)

1 ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ಜೆಜುನ್ ವೈರ್ ಸರ್ಗಾಕ್ಡೆ ಬಗಟ್ಲ್ಯಾನ್. ಅನಿ, ಬಾಬಾ ಎಳ್ ಯೆಲೊ, ಲೊಕಾನ್ ತುಕಾ ಮಹಿಮಾ ದಿವಸಾಟ್ನಿ ಲೆಕಾಕ್ ತಿಯಾ ತುಜಿ ಮಹಿಮಾ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:1
20 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.


ಆತನು ಮೂರನೆಯ ಸಾರಿ ಹೋಗಿ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಸಾಕು;


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು