Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:25 - ಕನ್ನಡ ಸತ್ಯವೇದವು J.V. (BSI)

25 ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಬರ್‍ಯಾ ಬಾಬಾ! ಹ್ಯೊ ಜಗ್ ತುಕಾ ವಳ್ಕಿನಾ, ಖರೆ ಮಿಯಾ ತುಕಾ ವಳಕ್ತಾ. ಅನಿ ಹೆಂಕಾ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:25
37 ತಿಳಿವುಗಳ ಹೋಲಿಕೆ  

ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು.


ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.


ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.


ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.


ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು