Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:26 - ಕನ್ನಡ ಸತ್ಯವೇದವು J.V. (BSI)

26 ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಿಯಾ ತೆಂಕಾ ತುಜಿ ಖರಿ ವಳಕ್ ಕರುನ್ ದಿಲಾ, ಅನಿ ಅನಿ ಫಿಡೆಬಿ ಮಿಯಾ ತೆಂಕಾ ತುಜಿ ಖರಿ ವಳಕ್ ದಿವ್ನಗೆತುಚ್ ರ್‍ಹಾತಾ. ಅಶೆ ಮಾಜೆ ವರ್ತಿ ತುಕಾ ಅಸಲ್ಲೊ ಪ್ರೆಮ್ ತೆಂಚ್ಯಾ ಮದ್ದಿಬಿ ರ್‍ಹಾವ್ಕ್ ಹೊತಾ, ಅನಿ ಅಶೆ ಮಿಯಾಬಿ ತೆಂಚ್ಯಾ ಮದ್ದಿ ರ್‍ಹಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:26
28 ತಿಳಿವುಗಳ ಹೋಲಿಕೆ  

ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ; ನನ್ನ ಪ್ರೀತಿಯಲ್ಲಿ ನೆಲೆಗೊಂಡಿರ್ರಿ.


ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿಪದಗಳನ್ನು ಹಾಡುವೆನು ಎಂತಲೂ


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಾ ಇದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನನಗೆ ಮಾನಬರಬೇಕೆಂದು ನಾನು ಅಪೇಕ್ಷಿಸುವದಿಲ್ಲ; ನನಗೆ ಮಾನಬರಬೇಕೆಂದು ಅಪೇಕ್ಷಿಸುವವನು ಒಬ್ಬನಿದ್ದಾನೆ; ಆತನೇ ನ್ಯಾಯತೀರಿಸುವನು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು