Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:4 - ಕನ್ನಡ ಸತ್ಯವೇದವು J.V. (BSI)

4 ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಿಯಾ ಹ್ಯಾ ಜಿಮ್ನಿರ್ ತುಜಿ ಮಹಿಮಾ ದಾಕ್ವುಲಾ ತಿಯಾ ಮಾಕಾ ಒಪಸಲ್ಲೆ ಕಾಮ್ ಮಿಯಾ ಕರುನ್ ಸಾರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:4
13 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ;


ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು