Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:17 - ಕನ್ನಡ ಸತ್ಯವೇದವು J.V. (BSI)

17 ಆಗ ಬಾಗಲು ಕಾಯುವ ದಾಸಿಯು - ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನೇನು? ಎಂದು ಪೇತ್ರನನ್ನು ಕೇಳಲು ಅವನು - ಅಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು. ಪೇತ್ರನು, “ಇಲ್ಲ, ನಾನಲ್ಲ!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಥೈ ವಾಟೆಕ್ಡೆ ಹೊತ್ತ್ಯಾ ಕಾಮಾಚ್ಯಾ ಚೆಡ್ವಾನ್ ಪೆದ್ರುಕ್, “ತಿಯಾಬಿ ತ್ಯಾ ಮಾನ್ಸಾಚ್ಯಾ ಶಿಸಾನಿತ್ಲೊ ಎಕ್ಲೊ ನ್ಹಯ್ ಕಾಯ್?” ಮಟ್ಲ್ಯಾನ್. ತನ್ನಾ ಪೆದ್ರುನ್, “ನಾ ಮಿಯಾ ನ್ಹಯ್” ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:17
11 ತಿಳಿವುಗಳ ಹೋಲಿಕೆ  

ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಇತ್ತಲಾಗಿ ಸೀಮೋನ ಪೇತ್ರನು ನಿಂತುಕೊಂಡು ಚಳಿಕಾಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು - ನೀನು ಅವನ ಶಿಷ್ಯರಲ್ಲಿ ಒಬ್ಬನೇನು? ಎಂದು ಕೇಳಲು ಅವನು - ಅಲ್ಲ ಅಂದನು.


ಪೇತ್ರನು ಹೊರಗೆ ಬಾಗಲ ಹತ್ತರ ನಿಂತಿದ್ದರಿಂದ ಮಹಾಯಾಜಕನ ಪರಿಚಿತನಾದ ಆ ಶಿಷ್ಯನು ಹೊರಗೆ ಬಂದು ಬಾಗಲು ಕಾಯುವವಳ ಸಂಗಡ ಮಾತಾಡಿ ಪೇತ್ರನನ್ನು ಒಳಕ್ಕೆ ಕರಕೊಂಡು ಹೋದನು.


ಅವರು ಆತನನ್ನು ಹಿಡಿದು ಸಾಗಿಸಿಕೊಂಡು ಮಹಾಯಾಜಕನ ಮನೆಯೊಳಕ್ಕೆ ತೆಗೆದುಕೊಂಡು ಹೋದರು; ಪೇತ್ರನು ದೂರದಿಂದ ಹಿಂದೆಹಿಂದೆ ಹೋಗುತ್ತಿದ್ದನು.


ಪೇತ್ರನು ಆತನಿಗೆ - ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಎಂದಿಗೂ ಹಿಂಜರಿಯುವದಿಲ್ಲ ಎಂದು ಉತ್ತರಕೊಡಲು


ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಚಾಕರಿಯವಳು ನೋಡುವದಕ್ಕೆ ಬಂದಳು.


ಅದಕ್ಕೆ ಯೇಸು - ನಾನೇ ಅವನೆಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೇ ಹುಡುಕುವವರಾದರೆ ಇವರು ಹೋಗಬಿಡಿರಿ ಅಂದನು.


ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು