Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:18 - ಕನ್ನಡ ಸತ್ಯವೇದವು J.V. (BSI)

18 ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಥಂಡ್ ಕುರುಲಾಗಲ್ಲಿ ತಸೆ ಮನುನ್ ಆಳಾನಿ ಅನಿ ರಾಕ್ವಾಲ್ಯಾನಿ ಎಕ್ ಧುಮಿ ಘಾಟ್ಲ್ಯಾನಿ ಅನಿ ಧುಮಿಚ್ಯಾ ಭೊತ್ಯಾನಿ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲ್ಯಾನಿ. ತಸೆಮನುನ್ ಪೆದ್ರುಬಿ ಗೆಲೊ ಅನಿ ತೆಂಚ್ಯಾ ವಾಂಗ್ಡಾ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:18
16 ತಿಳಿವುಗಳ ಹೋಲಿಕೆ  

ಮತ್ತು ಪೇತ್ರನು ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದೊಳಗೂ ಬಂದು ಓಲೇಕಾರರ ಸಂಗಡ ಬೆಂಕಿಯ ಮುಂದೆ ಕೂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.


ಇತ್ತಲಾಗಿ ಸೀಮೋನ ಪೇತ್ರನು ನಿಂತುಕೊಂಡು ಚಳಿಕಾಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು - ನೀನು ಅವನ ಶಿಷ್ಯರಲ್ಲಿ ಒಬ್ಬನೇನು? ಎಂದು ಕೇಳಲು ಅವನು - ಅಲ್ಲ ಅಂದನು.


ಅವರು ಭೂವಿುಗೆ ಇಳಿದಾಗ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿ ಸಹಿತವಾಗಿ ಕಂಡರು.


ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು