ಯೋಹಾನ 18:20 - ಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ಜೆಜುನ್ ಮಿಯಾ ಕನ್ನಾಬಿ ಸಗ್ಳ್ಯಾಕ್ನಿ ಕಾಯ್ಬಿ ಧಾಪುನ್ ಘೆಯ್ನಸ್ತಾನಾ, ಬೊಲ್ಲಾ, ಮಿಯಾ ದೆವಾಚ್ಯಾ ಗುಡಿತ್ ಅನಿ ಸಿನಾಗೊಗಾತ್ನಿ ಮಾಜಿ ಸಗ್ಳಿ ಶಿಕಾಪಾ ಶಿಕ್ವುಲಾ, ಥೈ ಸಗ್ಳಿ ಲೊಕಾ ಗೊಳಾ ಹೊಲ್ಲಿ ರ್‍ಹಾಯ್ತ್, ಮಿಯಾ ಕಾಯ್ಬಿ ಧಾಪುನ್ ಥವ್ನ್ ಘೆವ್ನ್ ಬೊಲುಕ್ನಾ. ಅಧ್ಯಾಯವನ್ನು ನೋಡಿ |