Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:28 - ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬ‍ಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:28
33 ತಿಳಿವುಗಳ ಹೋಲಿಕೆ  

ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.


ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು.


ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು.


ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.


ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ಆದರೆ ಪಸ್ಕಹಬ್ಬದಲ್ಲಿ ನಾನು ಒಬ್ಬನನ್ನು ನಿಮಗೆ ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಅವರನ್ನು ಕೇಳಿದನು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -


ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಗೆ ಸೇರಿದ ಅಂಗಳದೊಳಕ್ಕೆ ಸಾಗಿಸಿಕೊಂಡುಹೋಗಿ ಪಟಾಲಮನ್ನೆಲ್ಲಾ ಒಟ್ಟಿಗೆ ಕರೆದು


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ಇವನು ಆ ವರುಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.


ಸೀಮೋನ ಪೇತ್ರನೂ ಮತ್ತೊಬ್ಬ ಶಿಷ್ಯನೂ ಯೇಸುವಿನ ಹಿಂದೆ ಹೋದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಿತಿ ಇದ್ದದರಿಂದ ಯೇಸುವಿನ ಕೂಡ ಮಹಾಯಾಜಕನ ಅಂಗಳದೊಳಕ್ಕೆ ಹೋದನು;


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸಬೇಕು; ಅವನು ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿ ಅದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು