Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:3 - ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ಜುದಾಸ್ ರೊಮಾಚ್ಯಾ ಸೈನಿಕಾಚೊ ಎಕ್ ತಾಂಡೊ, ಅನಿ ಉಲ್ಲ್ಯಾ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಕ್ನಿ, ಘೆವ್ನ್ ತ್ಯಾ ಮಳ್ಯಾಕ್ ಯೆಲೊ, ತೆಂಕಾ ಯಾಜಕಾಂಚ್ಯಾ ಮುಖಂಡಾನಿ ಅನಿ ಫಾರಿಜೆವಾನಿ ಧಾಡುನ್ ದಿಲ್ಲ್ಯಾನಿ, ತೆನಿ ಹಾತಿಯಾರಾ, ಲಾಟ್ನಿಯಾ, ಅನಿ ಚುಡ್ತಿಯಾ ಘೆವ್ನ್ ಯೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:3
15 ತಿಳಿವುಗಳ ಹೋಲಿಕೆ  

ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.


ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.


ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.


ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು