Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:32 - ಕನ್ನಡ ಸತ್ಯವೇದವು J.V. (BSI)

32 ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 (ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅಪ್ನಿ ಕಸ್ಲ್ಯಾ ರಿತಿಚೆ ಮರಾನ್ ಮರ್‍ತಲೊ ಹಾಂವ್ ಮನುನ್ ಜೆಜುನ್ ಸಾಂಗಲ್ಲೆ ಪುರಾ ಹೊವ್‍ಸಾಟ್ನಿ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:32
17 ತಿಳಿವುಗಳ ಹೋಲಿಕೆ  

ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.


ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.


ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು