Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:35 - ಕನ್ನಡ ಸತ್ಯವೇದವು J.V. (BSI)

35 ಪಿಲಾತನು - ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನವೂ ಮಹಾಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಪಿಲಾತಾನ್ “ತಿಯಾ ಕಾಯ್ ಮಿಯಾ ಜುದೆವ್ ಮನುನ್ ಚಿಂತ್ಲೆ ಕಾಯ್? ತುಜ್ಯಾ ಸ್ವತಾಚ್ಯಾ ಲೊಕಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ತುಕಾ ಮಾಜ್ಯಾ ತಾಬೆತ್ ದಿಲ್ಯಾನಾತ್. ತಿಯಾ ಕಾಯ್ ಕರ್‍ಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:35
14 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.


ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಯೇಸು - ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಮತ್ತೊಬ್ಬರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ ಎಂದು ಕೇಳಲು


ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು