Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:38 - ಕನ್ನಡ ಸತ್ಯವೇದವು J.V. (BSI)

38 ಪಿಲಾತನು - ಸತ್ಯವಂದರೇನು? ಅಂದನು. ಇದನ್ನು ಹೇಳಿ ಪಿಲಾತನು ತಿರಿಗಿ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದು - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ, “ಖರೆ ಮಟ್ಲ್ಯಾರ್ ಕಾಯ್?” ಮನುನ್ ಪಿಲಾತಾನ್ ಇಚಾರ್‍ಲ್ಯಾನ್. ಮಾನಾ ಪಿಲಾತ್ ಭಾಯ್ರ್ ಲೊಕಾನಿಕ್ಡೆ ಗೆಲೊ, ಅನಿ ತೆನಿ ತೆಂಕಾ “ಮಾಕಾ ತೆಚಿ ಕಾಯ್ಬಿ ಚುಕ್ ಗಾವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:38
14 ತಿಳಿವುಗಳ ಹೋಲಿಕೆ  

ತರುವಾಯ ಪಿಲಾತನು ತಿರಿಗಿ ಹೊರಗೆ ಬಂದು ಯೆಹೂದ್ಯರಿಗೆ - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ಹೊರಗೆ ತರುತ್ತೇನೆ, ನೋಡಿರಿ ಎಂದು ಹೇಳಿದನು.


ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.


ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.


ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -


ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು