Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:4 - ಕನ್ನಡ ಸತ್ಯವೇದವು J.V. (BSI)

4 ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುಕ್ ಅಪ್ನಾಕ್ ಕಾಯ್-ಕಾಯ್ ಹೊತಲೆ ಹಾಯ್ ಮನುನ್ ಗೊತ್ತ್ ಹೊತ್ತೆ, ತಸೆಮನುನ್ ತೊ ಉಲ್ಲೆ ಫಿಡೆ ಗೆಲೊ, ಅನಿ “ತುಮಿ ಕೊನಾಕ್ ಹುಡ್ಕುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:4
27 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.


ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.


ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಯೇಸು ತನ್ನನ್ನು ಹಿಡುಕೊಡುವವನು ಇಂಥವನೇ ಎಂದು ತಿಳಿದಿದ್ದದರಿಂದ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದನು.


ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.


ಅವರು ಊಟಮಾಡುತ್ತಿರುವಾಗ ಆತನು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.


ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು