Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:5 - ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು, “ನಜರೇತಿನ ಯೇಸುವನ್ನು,” ಎಂದರು. ಯೇಸು, “ನಾನೇ ಆತ,” ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯೇಸುವಿಗೆ, “ನಜರೇತಿನ ಯೇಸುವನ್ನು,” ಎಂದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು,” ಎಂದರು. ಅವರನ್ನು ಹಿಡಿದುಕೊಡಲಿದ್ದ ಯೂದನು ಸಹ ಅವರೊಂದಿಗೆ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತೆನಿ “ನಜರೆತಾಚ್ಯಾ ಜೆಜುಕ್” ಮನುನ್ ಜಬಾಬ್ ದಿಲ್ಲ್ಯಾನಿ. ತನ್ನಾ ತೆನಿ, “ಮಿಯಾಚ್ ತೊ” ಮಟ್ಲ್ಯಾನ್, ಜುದಾಸ್ ಇಸ್ಕರಿಯೊತ್ ತೆಂಚ್ಯಾ ವಾಂಗ್ಡಾ ಥೈ ಇಬೆ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:5
8 ತಿಳಿವುಗಳ ಹೋಲಿಕೆ  

ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು.


ಆತನು ಅವರಿಗೆ - ನಾನೇ ಅವನು ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲದ ಮೇಲೆ ಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು