Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:8 - ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಯೇಸು - ನಾನೇ ಅವನೆಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೇ ಹುಡುಕುವವರಾದರೆ ಇವರು ಹೋಗಬಿಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್,“ಮಿಯಾ ತುಮ್ಕಾ ವಾಡ್ಗೊಳುಚ್ ಸಾಂಗ್ಲಾ ಮಿಯಾಚ್ ತೊ, ಮನುನ್, ತುಮಿ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ ಹೊಲ್ಯಾರ್, ಹ್ಯಾ ಹುರಲ್ಲ್ಯಾಕ್ನಿ ಜಾವ್ಕ್ ದಿವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:8
13 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.


ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ಹೀಗೆ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು