ಯೋಹಾನ 19:13 - ಕನ್ನಡ ಸತ್ಯವೇದವು J.V. (BSI)13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಹ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಪಿಲಾತ್ ಜೆಜುಕ್ ಘರಾತ್ನಾ ಭಾಯ್ರ್ ಹನ್ಲ್ಯಾನ್, ಅನಿ , ಮಟ್ಲ್ಯಾರ್, ಗುಂಡ್ಯಾಚೊ ಕಟ್ಟೊ “ಹೆಬ್ರೆವ್ ಬಾಶೆನ್ ತೆಕಾ ಗಬ್ಬಾಥಾ ಮನ್ತ್ಯಾತ್” ತ್ಯಾ ಜಾಗ್ಯಾ ವರ್ತಿ ಬಸುನ್ ಝಡ್ತಿ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸ್ವುಲ್ಯಾನ್. ಅಧ್ಯಾಯವನ್ನು ನೋಡಿ |