Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:14 - ಕನ್ನಡ ಸತ್ಯವೇದವು J.V. (BSI)

14 ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಾಸ್ಕಾಚ್ಯಾ ಸನಾಚೊ ಅದ್ಲೊ ದಿಸ್ ತೊ ಜಗ್ಗೊಳ್-ಜಗ್ಗೊಳ್ ದೊಪಾರ್ ಹೊವ್ನಗೆತ್ ಯೆಲ್ಲಿ ತನ್ನಾ ಪಿಲಾತಾನ್ ಲೊಕಾಕ್ನಿ,“ಹಿತ್ತೆ ಬಗಾ ತುಮ್ಚೊ ರಾಜಾ!” ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:14
12 ತಿಳಿವುಗಳ ಹೋಲಿಕೆ  

ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -


ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು.


ಆ ದಿನವು ಯೆಹೂದ್ಯರ ಸೌರಣೆಯ ದಿನವಾದದ್ದರಿಂದ ಆ ಸಮಾಧಿ ಹತ್ತರವಿರುತ್ತದೆಂದು ಯೇಸುವನ್ನು ಅಲ್ಲೇ ಇಟ್ಟರು.


ಆತನನ್ನು ಶಿಲುಬೆಗೆ ಹಾಕುವಾಗ ಹೊತ್ತಾರೆ ಒಂಭತ್ತು ಗಂಟೆಯಾಗಿತ್ತು.


ಆತನ ಬಳಿಗೆ ಬಂದು - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ; ಎಂದು ಹೇಳಿ ಆತನ ಕೆನ್ನೆಗೆ ಏಟುಹಾಕಿದರು.


ಆ ದಿನವು ಸೌರಣೆಯ ದಿನವಾಗಿತ್ತು; ಮತ್ತು ಸಬ್ಬತ್‍ದಿನ ಪ್ರಾರಂಭವಾಗುವದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.


ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ಸೌರಣೆಯ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನ ಆಗಿತ್ತು.


ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು