Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:20 - ಕನ್ನಡ ಸತ್ಯವೇದವು J.V. (BSI)

20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದದರಿಂದ ಯೆಹೂದ್ಯರಲ್ಲಿ ಬಹಳ ಮಂದಿ ಆ ವಿಳಾಸವನ್ನು ಓದಿದರು. ಅದು ಇಬ್ರಿಯ ಲಾತೀನ್ ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸುಮಾರ್ ಲೊಕಾನಿ ಹೆ ವಾಚ್ವುಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆಜುಕ್ ಕುರ್ಸಾ ವರ್ತಿ ಮಾರಲ್ಲೊ ಜಾಗೊ ಶಾರಾತ್ನಾ ಜಗೊಳ್ ಹೊತ್ತೊ, ತೆ ಲಿವಲ್ಲೆ, ಹೆಬ್ರೆವ್, ಲ್ಯಾಟಿನ್, ಅನಿ ಗ್ರಿಕ್ ಬಾಶೆತ್ ಲಿವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:20
11 ತಿಳಿವುಗಳ ಹೋಲಿಕೆ  

ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.


ನಾವೆಲ್ಲರು ನೆಲಕ್ಕೆ ಬೀಳಲು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು.


ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ -


ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -


ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.


ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.


ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ಇದಲ್ಲದೆ ಆತನ ಮೇಲ್ಗಡೆಯಲ್ಲಿ - ಇವನು ಯೆಹೂದ್ಯರ ಅರಸನು ಎಂಬದಾಗಿ ಒಂದು ವಿಳಾಸವಿತ್ತು.


ಆ ದಿನವು ಯೆಹೂದ್ಯರ ಸೌರಣೆಯ ದಿನವಾದದ್ದರಿಂದ ಆ ಸಮಾಧಿ ಹತ್ತರವಿರುತ್ತದೆಂದು ಯೇಸುವನ್ನು ಅಲ್ಲೇ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು