Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:23 - ಕನ್ನಡ ಸತ್ಯವೇದವು J.V. (BSI)

23 ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ಮೇಲುಹೊದಿಕೆಗಳನ್ನು ತಕ್ಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಪಾಲಿನ ಪ್ರಕಾರ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಅಖಂಡವಾಗಿ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುಕ್ ಕುರ್ಸಾರ್ ಮಾರುನ್ ಹೊಲ್ಲ್ಯಾ ಮಾನಾ ಸೈನಿಕಾನಿ ತೆಚೆ ಕಪ್ಡೆ ಘೆಟ್ಲ್ಯಾನಿ ಅನಿ ಚಾರ್ ವಾಟೆ ಕರುನ್ ಎಗಳ್ಳ್ಯಾನಿ, ಎಕೆಕ್ ವಾಟೊ ಎಕೆಕ್ಲ್ಯಾನಿ ಚಾರ್ ಸೈನಿಕಾನಿ ತೆ ವಾಟುನ್ ಘೆಟ್ಲ್ಯಾನಿ, ತೆನಿ ತೆಚೊ ಝಗೊಬಿ ಘೆಟ್ಲ್ಯಾನಿ. ತೊ ಎಕ್ ಸೈತ್ ಶಿವನ್ ನಸ್ತಾನಾ ವೈನಾ ಖಾಯ್ಲ್ ಪತರ್ ಎಕಾಕ್ನಾ ಗುತುನ್‍ಗೆತ್ ಯೆಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:23
6 ತಿಳಿವುಗಳ ಹೋಲಿಕೆ  

ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವ ಯಾವದು ಯಾರಾರಿಗೆ ಆಗಬೇಕೆಂದು ಚೀಟುಹಾಕಿ ಪಾಲುಮಾಡಿಕೊಂಡರು.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು