Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:24 - ಕನ್ನಡ ಸತ್ಯವೇದವು J.V. (BSI)

24 ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸೈನಿಕಾನಿ ಎಕಾಮೆಕಾಕ್ನಿ “ಅಮಿ ಹ್ಯೊ ಪಿಂಜ್ತಲೊ ನಕ್ಕೊ, ಚಿಟಿಯಾ ಘಾಲುನ್ ಕೊನಾಕ್ ಯೆತಾ ಕಾಯ್ ಮನುನ್ ಬಗುವಾ” ಮಟ್ಲ್ಯಾನಿ. ಅಶೆ ಪವಿತ್ರ್ ಪುಸ್ತಕಾತ್, “ತೆನಿ ಮಾಜೆ ಕಪ್ಡೆ ಅಪ್ನಾಂಚ್ಯಾ ಮದ್ದಿ ವಾಟುನ್ ಘೆಟ್ಲ್ಯಾನಿ, ಅನಿ ಮಾಜ್ಯಾ ಝಾಗ್ಯಾಸಾಟ್ನಿ ಚಿಟಿಯಾ ಘಾಟ್ಲ್ಯಾನಿ”. ಮನುನ್ ಸಾಂಗಲ್ಲೆ ಪುರಾ ಹೊಲೆ. ಸೈನಿಕಾನಿ ಅಸೆಚ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:24
13 ತಿಳಿವುಗಳ ಹೋಲಿಕೆ  

ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲುಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವ ಯಾವದು ಯಾರಾರಿಗೆ ಆಗಬೇಕೆಂದು ಚೀಟುಹಾಕಿ ಪಾಲುಮಾಡಿಕೊಂಡರು.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು