Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:28 - ಕನ್ನಡ ಸತ್ಯವೇದವು J.V. (BSI)

28 ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಾಯ್ ಘಡ್ತಲೆ ಹಾಯ್ ತೆ ಸಗ್ಳೆ ಘಡುನ್ ಹೊಲೆ ಮನುನ್ ಜೆಜುಕ್ ಕಳ್ಳೆ. ಪವಿತ್ರ್ ಪುಸ್ತಕಾತ್ಲೆ ಖರೆ ಹೊವ್‍ಸಾಟ್ನಿ ತೆನಿ, “ಮಾಕಾ ಸೊಸ್‍ ಲಾಗ್ಲಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:28
14 ತಿಳಿವುಗಳ ಹೋಲಿಕೆ  

ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವದನ್ನೆಲ್ಲಾ ನೆರವೇರಿಸಿದ ಮೇಲೆ ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.


ಇವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇವಿುನಲ್ಲಿ ಆತನು ನೆರವೇರಿಸಬೇಕಾಗಿದ್ದ ಮರಣದ ವಿಷಯವಾಗಿ ಮಾತಾಡುತ್ತಿದ್ದರು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು