Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:30 - ಕನ್ನಡ ಸತ್ಯವೇದವು J.V. (BSI)

30 ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ತಿ ಅಂಬೊಟ್ಲಿ ವಾಯ್ನ್ ಫಿಲ್ಯಾನ್, ಅನಿ,“ಸರ್ಲೆ” ಮಟ್ಲ್ಯಾನ್ ಅನಿ ಅಪ್ನಾಚಿ ಮಾನ್ ಬಾಗ್ವುಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:30
28 ತಿಳಿವುಗಳ ಹೋಲಿಕೆ  

ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಆದರೆ ಯೇಸು ಮಹಾಧ್ವನಿಯನ್ನು ಗೈದು ಪ್ರಾಣಬಿಟ್ಟನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಯೇಸು ತಿರಿಗಿ ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು