Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:35 - ಕನ್ನಡ ಸತ್ಯವೇದವು J.V. (BSI)

35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆ ಕೊನ್ ಹೆ ಬಗಟ್ಲಾ ತ್ಯೆನಿಚ್, ತಿಯಾ ವಿಶ್ವಾಸ್ ಕರುಸಾಟ್ನಿ ಮನುನ್ ಸಾಕ್ಷಿ ದಿಲ್ಯಾನಾಯ್ ಅನಿ ಜೆ ಕಾಯ್ ತೆನಿ ಸಾಂಗ್ಲ್ಯಾನಾಯ್ ತೆ ಖರೆ ಹಾಯ್ ಅನಿ ತೊ ಖರೆ ಬೊಲುಲಾ ಮನುನ್ ತೆಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:35
15 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ.


ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು.


ಅದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆಯೇ ಈಗ ನಿಮಗೆ ಹೇಳಿದ್ದೇನೆ.


ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು