Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:38 - ಕನ್ನಡ ಸತ್ಯವೇದವು J.V. (BSI)

38 ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು - ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಬೇಡಿಕೊಂಡನು. ಪಿಲಾತನು ಅಪ್ಪಣೆಕೊಡಲಾಗಿ ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಹೆಚ್ಯಾ ಮಾನಾ, ಅರೆಮಾತಿಯಾ ಮನ್ತಲ್ಯಾ ಗಾಂವಾಂಚ್ಯಾ ಜುಜೆನ್ ಪಿಲಾತಾಕ್ಡೆ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರವಾನ್ಗಿ ಇಚಾರ್‍ಲ್ಯಾನ್. ಜುಜೆ ಎಕ್ ಜೆಜುಚ್ಯಾ ಫಾಟ್ನಾ ಹೊತ್ತೊ ಮಾನುಸ್, ಖರೆ ಹೆ ಕೊನಾಕ್ಬಿ ಗೊತ್ತ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೊ ಬಿ ಜುದೆವಾಚ್ಯಾ ಅದಿಕಾರ್‍ಯಾಕ್ನಿ ಭಿಂಯ್, ಪಿಲಾತಾನ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಹೊತಾ ಮಟ್ಲ್ಯಾನ್, ತಸೆಮನುನ್ ಜುಜೆ ಗೆಲೊ, ಅನಿ ಜೆಜುಚೆ ಮಡೆ ತೆನಿ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:38
9 ತಿಳಿವುಗಳ ಹೋಲಿಕೆ  

ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.


ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವದನ್ನೆಲ್ಲಾ ನೆರವೇರಿಸಿದ ಮೇಲೆ ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು