Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:10 - ಕನ್ನಡ ಸತ್ಯವೇದವು J.V. (BSI)

10 ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ “ಸಗ್ಳಿ ಲೊಕಾ ಅದ್ದಿ ಬರೊ ವಾಯ್ನ್ ವಾಟ್ತ್ಯಾತ್, ಪಾವ್ನ್ಯಾನಿ ಪಿವ್ನ್ ಖುಶಿ ಹೊಲ್ಲ್ಯಾ ಮಾನಾ, ಸಾದ್ರನಾಚೊ ವಾಯ್ನ್ ವಾಟ್ತ್ಯಾತ್, ಖರೆ ತಿಯಾ ಅಜುನ್‍ಬಿ ಬರೊ ವಾಯ್ನ್ ಥವ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:10
15 ತಿಳಿವುಗಳ ಹೋಲಿಕೆ  

ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ,


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ನೀವು ಭಾವಿಸಿದಂತೆ ಇವರು ಅಮಲೇರಿದವರಲ್ಲ; ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.


ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ನಿದ್ದೆಮಾಡುವವರು ರಾತ್ರಿಯಲ್ಲಿ ನಿದ್ದೆಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು