Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:11 - ಕನ್ನಡ ಸತ್ಯವೇದವು J.V. (BSI)

11 ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ ಗಾಲಿಲಿಯಾತ್ಲ್ಯಾ ಕಾನಾ ಮನ್ತಲ್ಯಾ ಶಾರಾತ್ ಪಯ್ಲೆಚೆ ಅಜಾಪ್ ಕರ್ಲ್ಯಾನ್, ಥೈ ತೆನಿ ಅಪ್ನಾಚಿ ಮಹಿಮಾ ದಾಕ್ವುನ್ ದಿಲ್ಯಾನ್, ಅನಿ ತೆಚಿ ಶಿಸಾ ತೆಚ್ಯಾ ವರ್ತಿ ತೆಕಾ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:11
43 ತಿಳಿವುಗಳ ಹೋಲಿಕೆ  

ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇವಿುನೊಳಗೆ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರು.


ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.


ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ.


ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.


ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.


ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಆಯಿತು; ಯೇಸುವಿನ ತಾಯಿ ಅಲ್ಲಿ ಇದ್ದಳು;


ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಈ ಎರಡನೆಯ ಸೂಚಕಕಾರ್ಯವನ್ನು ಮಾಡಿದನು.


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು.


ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಎದುರುಗೊಳ್ಳುವದಕ್ಕೆ ಹೋಗಿದ್ದರು.


ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು