Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:21 - ಕನ್ನಡ ಸತ್ಯವೇದವು J.V. (BSI)

21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ವಿಷಯವಾಗಿ ಆ ಮಾತನ್ನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 (ಆದರೆ ಯೇಸು ತನ್ನ ದೇಹವೇ ದೇವಾಲಯವೆಂಬ ಅರ್ಥದಲ್ಲಿ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಜೆಜು ಖಲ್ಯಾ ಗುಡಿಚೆ ಬೊಲುಲಾಗಲ್ಲೊ ಅಪ್ನಾಚ್ಯಾ ಸ್ವಂತ್ ಆಂಗಾಚ್ಯಾ ವಿಶಯಾತ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:21
10 ತಿಳಿವುಗಳ ಹೋಲಿಕೆ  

ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,


ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು