ಯೋಹಾನ 2:24 - ಕನ್ನಡ ಸತ್ಯವೇದವು J.V. (BSI)24 ಆದರೆ ಯೇಸು ಎಲ್ಲರನ್ನೂ ಬಲ್ಲವನಾದ್ದರಿಂದ ಅವರಿಗೆ ವಶವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಯೇಸು ಎಲ್ಲರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಅವರ ಈ ನಂಬಿಕೆಗೆ ಮಾರುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಯೇಸು ಅವರಲ್ಲಿ ಭರವಸೆ ಇಡಲಿಲ್ಲ. ಏಕೆಂದರೆ ಆತನು ಅವರನ್ನು ಚೆನ್ನಾಗಿ ಬಲ್ಲವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಯೇಸು ಎಲ್ಲರನ್ನೂ ಅರಿತವರಾದ್ದರಿಂದ ತಮ್ಮನ್ನು ಒಪ್ಪಿಸಿಕೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಖರೆ ಜೆಜುಕ್ ತೆಚ್ಯಾ ವಿಶ್ವಾಸಾಚ್ಯಾ ವರ್ತಿ ಅಪ್ನಾಕ್ ಸೊಡುನ್ ದಿವ್ಕ್ ನಾ ಕಶ್ಯಾಕ್ ಮಟ್ಲ್ಯಾರ್ ತೆಚ್ಯೆ ಸಗ್ಳೆ ಗೊತ್ತ್ ಹೊಲ್ಲೆ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.