Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:3 - ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ವಾಯ್ನ್ ಸರಲ್ಲ್ಯಾ ತನ್ನಾ ಜೆಜುಚ್ಯಾ ಬಾಯ್ನ್ ಜೆಜುಕ್,“ತೆಂಚ್ಯಾಕ್ಲಿ ಸಗ್ಳಿ ವಾಯ್ನ್ ಸರ್ಲಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:3
8 ತಿಳಿವುಗಳ ಹೋಲಿಕೆ  

ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು